ಕನ್ನಡಪ್ರಭ ವಾರ್ತೆ ಅಥಣಿ ದೇಶದ ಪ್ರಧಾನಿಯನ್ನು ವ್ಯಕ್ತಿ ಅಥವಾ ಯಾವುದೇ ಸಮುದಾಯ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮವಾಗಬೇಕು. ಪ್ರಧಾನಿಯನ್ನು ನಿಂದನೆ ಮಾಡಿದ ವ್ಯಕ್ತಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಅಥಣಿ
ದೇಶದ ಪ್ರಧಾನಿಯನ್ನು ವ್ಯಕ್ತಿ ಅಥವಾ ಯಾವುದೇ ಸಮುದಾಯ ಅವಾಚ್ಯ ಶಬ್ದಗಳಿಂದ ನಿಂದಿಸಿದರೆ ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮವಾಗಬೇಕು. ಪ್ರಧಾನಿಯನ್ನು ನಿಂದನೆ ಮಾಡಿದ ವ್ಯಕ್ತಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಮಾಜಿ ಶಾಸಕ ಮಹೇಶ ಕುಮಠಳ್ಳಿ ಆಗ್ರಹಿಸಿದರು.ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಬೆಳಗಾವಿ ಎಸ್ಪಿ ಕೆ.ರಾಮರಾಜನ ಅವರನ್ನು ರವಿವಾರ ಭೇಟಿ ಮಾಡಿದ ಮಾಜಿ ಶಾಸಕ ಮಹೇಶ ಕುಮಠಳ್ಳಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಪ್ರಧಾನಿಯನ್ನು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಇಮ್ತಿಯಾಜ್ ನೂರುದ್ದೀನ್ ಚಿಂಚಲಿಯನ್ನು ಬಂಧಿಸಿ ಆತನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿದರು.ಈ ವೇಳೆ ಮಾಜಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ದೇಶದಲ್ಲಿ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಪಟ್ಟಣದಲ್ಲಿ ವಾಹನ ಪಾರ್ಕಿಂಗ್‌ಗಾಗಿ ನಡೆದ ವಾಗ್ವಾದದಲ್ಲಿ ವಿನಾಕಾರಣ ಪ್ರಧಾನಿಯನ್ನು ನಿಂದನೆ ಮಾಡುತ್ತಿರುವದು ಎಷ್ಟು ಸರಿ? ಯಾವುದೇ ಒತ್ತಡಗಳಿಗೆ ಒಳಗಾಗದೆ ಆತನ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ವೇಳೆ ಬಿಜೆಪಿ ತಾಲೂಕಾಧ್ಯಕ್ಷ ಗಿರೀಶ ಬುಟಾಳೆ, ಮುಖಂಡರಾದ ಅಪ್ಪಾಸಾಬ ಅವತಾಡೆ, ಸಿದ್ದು ಪಾಟೀಲ, ಮಲ್ಲಪ್ಪ ಹಂಚನಾಳ, ನಿಂಗಪ್ಪ ನಂದೇಶ್ವರ, ಮಲ್ಲಿಕಾರ್ಜುನ ಅಂದಾನಿ, ಪುಟ್ಟು ಹಿರೇಮಠ, ಸಂಪತಕುಮಾರ ಶೆಟ್ಟಿ, ಆನಂದ ಟೊಣಪಿ, ಸಂತೋಷ ಕಕಮರಿ, ಅಶೋಕ ದಾನಗೊಂಡ, ದೀಪಕ ಪಾಟೀಲ, ಸಿದ್ದು ಮಾಳಿ, ಶಿವಾನಂದ ಐಗಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಏನಿದು ಘಟನೆ..?ಅಥಣಿ ಪಟ್ಟಣದ ಹಲ್ಯಾಳ ರಸ್ತೆಯ ಅಂಗಡಿ ಮುಂದೆ ಅನಧಿಕೃತ ಬ್ಯಾರಿಕೇಡ್ ತೆರವು ಮಾಡು ಎಂದಿದ್ದಕ್ಕೆ ಮುಸ್ಲಿಂ ವ್ಯಕ್ತಿ ತಾಳ್ಮೆ ಕಳೆದುಕೊಂಡು ಬೈಕ್ ಸವಾರನೊಂದಿಗೆ ಜಗಳಕ್ಕೆ ಇಳಿದು ಕಾನೂನು ವ್ಯವಸ್ಥೆಯ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡಿದ್ದಾನೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಚಿಂಚಲಿ ಲುಬ್ರಿಕಂಟ್ಸ್ ಅಂಗಡಿ ಮಾಲಿಕ ಇಮ್ತಿಯಾಜ್ ನೂರುದ್ದೀನ್ ಚಿಂಚಲಿ ಎಂಬಾತನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದು ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈತ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕರು ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಮುಖಂಡರು ಅಧಿಕೃತವಾಗಿ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿರುವುದರಿಂದ ಅಥಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ಫೋಟೊ ಶಿರ್ಷಿಕೆ: ಪ್ರಧಾನಿ ವಿರುದ್ದ ಅವಾಚ್ಚ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಅವರಿಗೆ ಮಾಜಿ ಶಾಸಕ ಮಹೇಶ ಕುಮಠಳ್ಳಿ ಮನವಿ ಸಲ್ಲಿಸಿದರು.