ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿಬಹುಗ್ರಾಮ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕವಾಗಿ ಪರಿಶೀಲನೆ ಮಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆ ಮಾಡಬೇಕು. ಎರಡು ವಿಭಾಗಗಳ ಗ್ರಾಮ ಮಟ್ಟದಲ್ಲಿನ ಓವರ್ ಹೆಡ್ ಟ್ಯಾಂಕ್‌ಗಳನ್ನು ತಿಂಗಳಿಗೆ ಕನಿಷ್ಠ ಒಂದು ಬಾರಿ ಗ್ರಾಮ ಪಂಚಾಯತಿಗಳು ಸ್ವಚ್ಛಗೊಳಿಸಬೇಕು. ಅದರ ಉಸ್ತುವಾರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ಕೂಡಲೇ ಮುಕ್ತಾಯಗೊಳಿಸಿ ಪಂಚಾಯತಿಗಳಿಗೆ ಹಸ್ತಾಂತರ ಮಾಡಿ ಪ್ರತಿಯೊಬ್ಬ ಅಧಿಕಾರಿಗಳು ಖುದ್ದಾಗಿ ಪಂಚಾಯತಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಬೇಕು. ಇದರ ಮೇಲ್ವಿಚಾರಣೆಯನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಡಾ.ಎಂ.ಕೃಷ್ಣರಾಜು, ಆರ್.ಡಿ.ಡಬ್ಲ್ಯೂ.ಎಸ್ ಬೆಳಗಾವಿ ವಿಭಾಗದ ಇಇ ಶಶಿಕಾಂತ ನಾಯಕ ಚಿಕ್ಕೋಡಿ ವಿಭಾಗದ ಇಇ ಪಾಂಡುರಂಗ ರಾವ್, ತಾಲೂಕಿನ ಎಇಇ, ಸಮಾಲೋಚಕರು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.