ಅಭಿವೃದ್ದಿ ಪಥದತ್ತ ಮನಗೂಳಿ ಪಟ್ಟಣ: ಸಚಿವ ಪಾಟೀಲ

| Published : Sep 17 2024, 12:51 AM IST

ಅಭಿವೃದ್ದಿ ಪಥದತ್ತ ಮನಗೂಳಿ ಪಟ್ಟಣ: ಸಚಿವ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಸವನಬಾಗೇವಾಡಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ಪರಿಣಾಮ ಪಟ್ಟಣ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದೆ ಎಂಧು ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಬಸವನಬಾಗೇವಾಡಿ ಮತಕ್ಷೇತ್ರದ ಮನಗೂಳಿ ಪಟ್ಟಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡ ಪರಿಣಾಮ ಪಟ್ಟಣ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತಿದೆ ಎಂಧು ಎಂದು ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ಘನತ್ಯಾಜ್ಯ ವಾಹನ ಮತ್ತು ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿಯಿಂದ ಅಳವಡಿಸಲಾಗಿರುವ ಸಿಸಿ ಕ್ಯಾಮರಾ ಕಾಮಗಾರಿ, ನವೀಕರಿಸಲಾದ ಪಂಚಾಯಿತಿಯ ಸಭಾಭವನವನ್ನು ಉದ್ಘಾಟಿಸಿ ಮಾತನಾಡಿದರು. ಮನಗೂಳಿ ಪಟ್ಟಣದಲ್ಲಿ ಸರ್ಕಾರಿ ಪದವಿ ಕಾಲೇಜು, ವಿದ್ಯಾರ್ಥಿನಿ ನಿಲಯ ಸೇರಿದಂತೆ ಸಾಕಷ್ಟು ಸರ್ಕಾರಿ ಕಟ್ಟಡಗಳು ನಿರ್ಮಾಣವಾಗುವ ಮೂಲಕ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲ ಆಗಿದೆ. ಕ್ಷೇತ್ರದ ಜನರ ಸಹಕಾರದಿಂದ ಬಸವನಬಾಗೇವಾಡಿ ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ದಿ ಹೊಂದುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿ ಹೊರ ಹೊಮ್ಮುತ್ತಿದೆ ಎಂದರು.ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶಬ್ಬೀರ ರೇವೂರಕರ ಮಾತನಾಡಿ, ಮನಗೂಳಿ ಪಟ್ಟಣದಲ್ಲಿ ಉಕ್ಕಲಿ ಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ ವೃತ್ತ, ಅಬ್ದುಲ್ ಕಲಾಂ ವೃತ್ತ, ಸೋಮೇಶ್ವರ ಭಜನಾ ಮಂಟಪದ ಹತ್ತಿರ, ಹೊಸ ಬಸ್ ನಿಲ್ದಾಣ, ಟಿಪ್ಪು ಸುಲ್ತಾನ ವೃತ್ತ, ಪೊಲೀಸ್ ಠಾಣೆ, ರಾಣಿ ಚನ್ನಮ್ಮ ವೃತ್ತ, ಶಿವಾಜಿ ವೃತ್ತ, ಅಗಸಿ ಹತ್ತಿರ ಸೇರಿದಂತೆ ಒಟ್ಟು ೧೧ ಕಡೆಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ ಕ್ಯಾಮರಾದೊಂದಿಗೆ ಸೌಂಡ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಮೂಲಕ ನೇರವಾಗಿ ಪಂಚಾಯಿತಿಯಿಂದಲೇ ಮಾಹಿತಿಯನ್ನು ರವಾನಿಸಬಹುದಾಗಿದೆ. ಅಲ್ಲದೇ ಪಟ್ಟಣ ಪಂಚಾಯಿತಿಯಲ್ಲಿನ ಸಭಾ ಭವನ ನವೀಕರಿಸಲಾಗಿದೆ ಎಂದರು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಕಾಂಗ್ರೆಸ್ ಉಪಾಧ್ಯಕ್ಷ ಶಿವನಗೌಡ ಗುಜಗೊಂಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಮುಖಂಡರಾದ ಭಾಗ್ಯರಾಜ ಸೊನ್ನದ, ಅಜೀತ್ ಜಾನಕರ ಇತರರು ಇದ್ದರು.