ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ಮಾನಸ ವಿದ್ಯಾಸಂಸ್ಥೆ: ಚಲುವರಾಯಸ್ವಾಮಿ

| Published : Feb 10 2025, 01:49 AM IST

ಗ್ರಾಮೀಣ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿರುವ ಮಾನಸ ವಿದ್ಯಾಸಂಸ್ಥೆ: ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳಿಗೆ ಶಿಕ್ಷಣ ನೀಡುವುದು ಕೇವಲ ವಿದ್ಯಾ ಸಂಸ್ಥೆ ಅಥವಾ ಶಿಕ್ಷಕರ ಜವಾಬ್ದಾರಿಯಲ್ಲ. ಇದರಲ್ಲಿ ಪೋಷಕರ ಹೊಣೆಗಾರಿಕೆಯೂ ಇದೆ. ಪೋಷಕರು ಆದಷ್ಟು ಮಕ್ಕಳು ಸಾಮಾಜಿಕ ಜಾಲತಾಣದ ಗೀಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವಲ್ಲಿ ಮಾನಸ ವಿದ್ಯಾ ಸಂಸ್ಥೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು.

ತಾಲೂಕಿನ ಬೆಸಗರಹಳ್ಳಿಯ ಮಾನಸ ವಿದ್ಯಾ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ ಆಂಗ್ಲ ಮಾಧ್ಯಮ ಶಾಲೆ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟಕರ. ಆದರೂ ಮಾಜಿ ಸೆನೆಟ್ ಸದಸ್ಯ ವಿ.ಕೆ.ಜಗದೀಶ ಕಳೆದ 35 ವರ್ಷಗಳಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದರು.

ಮಕ್ಕಳಿಗೆ ಶಿಕ್ಷಣ ನೀಡುವುದು ಕೇವಲ ವಿದ್ಯಾ ಸಂಸ್ಥೆ ಅಥವಾ ಶಿಕ್ಷಕರ ಜವಾಬ್ದಾರಿಯಲ್ಲ. ಇದರಲ್ಲಿ ಪೋಷಕರ ಹೊಣೆಗಾರಿಕೆಯೂ ಇದೆ. ಪೋಷಕರು ಆದಷ್ಟು ಮಕ್ಕಳು ಸಾಮಾಜಿಕ ಜಾಲತಾಣದ ಗೀಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕು ಎಂದರು.

ವಿದ್ಯಾರ್ಥಿಗಳು ಏಕಾಗ್ರತೆ ಶಿಸ್ತುಬದ್ಧ ಶಿಕ್ಷಣ ಕಲಿಯುವ ನಿಟ್ಟಿನಲ್ಲಿ ತಲ್ಲೀನರಾಗಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಈ ವೇಳೆ ಮಾನಸ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿ.ಕೆ.ಜಗದೀಶ್, ಕಾರ್ಯದರ್ಶಿ ಎಚ್‌.ಪಿ.ನಾಗರಾಜು, ಖಜಾಂಚಿ ವಿ.ಕೆ.ಸನತ್ ಕುಮಾರ್, ಶೈಕ್ಷಣಿಕ ಸಲಹೆಗಾರ ನಿಂಗರಾಜು, ಪ್ರಾಂಶುಪಾಲ ರಾಧಾ ಪ್ರವೀಣ್ ಕುಮಾರ್, ಕೆ.ಮಮತಾ, ಡಿ.ಕರಡಿ ಗೌಡ ಪ್ರತಿಷ್ಠಾನದ ಕಾರ್ಯದರ್ಶಿ ಚೈತ್ರ ಬಾಣಸವಾಡಿ, ಮುಖ್ಯ ಶಿಕ್ಷಕರಾದ ರಮೇಶ್, ಆರ್.ಪಲ್ಲವಿ, ಎಸ್. ಶರತ್, ಬಸವರಾಜು, ಕಲಾವತಿ, ಮತ್ತಿತರರಿದ್ದರು.