ಸಾರಾಂಶ
ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಂಡಲಪೂಜೆ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೆ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಂಡಲ ಪೂಜೋತ್ಸವ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ದೇವಾಲಯದಲ್ಲಿ ಧ್ವಜಾರೋಹಣ ನಡೆಯಿತು. ಅರ್ಚಕರಾದ ಕೃಷ್ಣಮೂರ್ತಿ ಭಟ್ , ಸೋಮಶೇಖರ್ ವಿಷ್ಣುಮೂರ್ತಿ ಭಟ್ ಅವರಿಂದ ಪೂಜಾ ಕಾರ್ಯಕ್ರಮ ನಡೆಯಿತು.
ನಂತರ ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳಿಂದ ಸಾಮೂಹಿಕ ಪೂಜೆ ಸಲ್ಲಿಸಲಾಯಿತು.ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ ಪಿ ಗಣಪತಿ, ಕಾರ್ಯದರ್ಶಿ ಮಹೇಶ ನಾಲ್ವಡೆ, ಖಜಾಂಚಿ ಸುಬ್ರಮಣಿ, ಜಂಟಿ ಕಾರ್ಯದರ್ಶಿ ಶ್ರೀನಿವಾಸ್, ಡಿ ಕೆ ತಿಮ್ಮಪ್ಪ, ವಿ ಎಸ್ ಆನಂದ್ ಕುಮಾರ್, ಡಿ ಆರ್ ಸೋಮಶೇಖರ್, ಕರಪ್ಪು ಸ್ವಾಮಿ, ಚಂದ್ರು, ದೇವಾಲಯ ಒಕ್ಕೂಟ ಉಪಾಧ್ಯಕ್ಷ ರಾಮದಾಸ್, ಖಜಾಂಚಿ ಎಸ್ ಕೆ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಎಂ ಎನ್ ಚಂದ್ರಮೋಹನ್ ಮತ್ತಿತರರು ಇದ್ದರು.