ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಕೆರೆಯಂಗಳದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಘಟಕ-1ರಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀ ಅಂದರೆ ಅಷ್ಟೆ ಸಾಕೆ ಅಭಿನಂದನಾ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಖೋಖೋ ಅಟಗಾರ್ತಿ ಚೈತ್ರಾರನ್ನು ಗಣ್ಯರು ಅಭಿನಂದಿಸಿ ನಗದು ಪುರಸ್ಕಾರ ನೀಡಿ ಗೌರವಿಸಿದರು.ಲೇಖಕಿ ಭವಾನಿ ಲೋಕೇಶ್, ಅಂತಾರಾಷ್ಟ್ರೀಯ ಅಲಯನ್ಸ್ ಸಂಸ್ಥೆ ನಿರ್ದೇಶಕ ಡಾ.ನಾಗರಾಜ್ ವಿ.ಭೈರಿ, ಜಿಲ್ಲಾ ರಾಜ್ಯಪಾಲ ಕೆ.ಟಿ. ಹನುಮಂತು, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಅಧ್ಯಕ್ಷ ಪ್ರೊ.ಡೇವಿಡ್ , ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಘಟಕ-1ರ ನಿಲಯಪಾಲಕರಾದ ಎಸ್.ಯೋಗಿತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎನ್.ಮಂಜುನಾಥ್ ನಾಯ್ಡು, ಅಲಯನ್ಸ್ ಸಂಸ್ಥೆ ಸಂಪುಟ ಕಾರ್ಯದರ್ಶಿ ಕೆ.ಎಸ್.ಚಂದ್ರಶೇಖರ್ ಇದ್ದರು.ಸರ್ವ ಸದಸ್ಯರ ವಾರ್ಷಿಕ ಮಹಾಸಭೆ: ಪ್ರತಿಭಾ ಪುರಸ್ಕಾರ
ಮಂಡ್ಯ: ನಗರದ ವಿ.ಸಿ.ಫಾರ್ಮ್ ಗೇಟ್ ಬಳಿಯ ಮಂಡ್ಯ ಸ್ಪೋರ್ಟ್ಸ್ ಸಂಸ್ಥೆ ಆವರಣದಲ್ಲಿ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ನಡೆಯಿತು.ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ದೇಹದಾರ್ಢ್ಯ ಸ್ಪರ್ದೆ ವಿಜೇತ ಕ್ರೀಡಾಪಟುಗಳನ್ನು ಅಭಿನಂದಿಸಿ ತಲಾ 2 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಲಾಯಿತು. ಮಂಡ್ಯ ಸ್ಪೋರ್ಟ್ಸ್ ಸಂಸ್ಥೆ ಅಧ್ಯಕ್ಷ ಕೆ.ಟಿ.ಹನುಮಂತು, ಉಪಾಧ್ಯಕ್ಷ ಆನಂದ್, ಕಾರ್ಯದರ್ಶಿ ನಾರಾಯಣಸ್ವಾಮಿ, ಖಜಾಂಚಿ ಮಂಜು, ನಿರ್ದೇಶಕರಾದ ಕಲ್ಲಹಳ್ಳಿ ಆನಂದ್, ಲಿಂಗೇಗೌಡ, ರಾಜೇಶ್, ಹೊನ್ನೇಗೌಡ, ರವಿ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))