ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರ ಚಾಲನೆ ನೀಡುವುದಕ್ಕೆ ಪ್ರಯತ್ನಿಸಲಾಗುತ್ತಿದೆ. ಆಸ್ಪತ್ರೆಯ ಬಂಕರ್ ಹಾಗೂ ಎಲೆಕ್ಟ್ರಿಕ್ ಕಾಮಗಾರಿ ಕೆಲಸಗಳು ಪ್ರಗತಿಯಲ್ಲಿವೆ ಎಂದು ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ ಹೇಳಿದರು.ಕ್ಯಾನ್ಸರ್ ಆಸ್ಪತ್ರೆಯನ್ನು ೪೫ ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ೧೭.೪೦ ಕೋಟಿ ರು. ಮೌಲ್ಯದ ಲಿನಾಕ್, ಬ್ರೇಕಿ ಥೆರಪಿ, ಮೌಡ್ಸ್ ಚಿಕಿತ್ಸಾ ಉಪಕರಣಗಳು ಆಸ್ಪತ್ರೆಗೆ ಬಂದಿದ್ದು, ಬಂಕರ್, ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು. ೧.೭೪ ಕೋಟಿ ರು. ವೆಚ್ಚದಲ್ಲಿ ವಿದ್ಯುತ್ ಕೇಂದ್ರದಿಂದ ಆಸ್ಪತ್ರೆಗೆ ನೇರ ಕೇಬಲ್ ಸಂಪರ್ಕ ಕಲ್ಪಿಸಲಾಗುವುದು ಎಂದು ‘ಕನ್ನಡಪ್ರಭ’ಕ್ಕೆ ತಿಳಿಸಿದರು.
ಕ್ಯಾನ್ಸರ್ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿ ನೇಮಕಕ್ಕೆ ಹಣಕಾಸು ಇಲಾಖೆಯ ಅನುಮತಿಗಾಗಿ ಕಾಯುತ್ತಿದ್ದೇವೆ. ಅನುಮತಿ ಸಿಕ್ಕ ಕೂಡಲೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದರು.ಆಸ್ಪತ್ರೆ ಅಭಿವೃದ್ಧಿಗೆ ಎಚ್‌ಡಿಕೆ ಸಹಕಾರ:
ಮಿಮ್ಸ್ ಆಸ್ಪತ್ರೆ ಅಭಿವೃದ್ಧಿಗೆ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಹೆಚ್ಚಿನ ಸಹಕಾರ ನೀಡಿದ್ದಾರೆ. ೧.೪೦ ಕೋಟಿ ರು. ವೆಚ್ಚದಲ್ಲಿ ಲಿಫ್ಟ್, ವಿವಿಧ ವಿಭಾಗಗಳ ಪುನಶ್ಚೇತನ, ಶೌಚಾಲಯ ಬ್ಲಾಕ್ ನಿರ್ಮಾಣ, ೯೦ ಲಕ್ಷ ರು. ವೆಚ್ಚದಲ್ಲಿ ರಸ್ತೆ, ೨೪ ಲಕ್ಷ ರು. ವೆಚ್ಚದಲ್ಲಿ ಬ್ರೈನ್ ಎಆರ್‌ಐ ಕ್ರಾರಲ್, ೧೧ ಲಕ್ಷ ರು. ವೆಚ್ಚದಲ್ಲಿ ಮಕ್ಕಳ ಹೃದಯ ಬಡಿತ ಪರೀಕ್ಷಿಸುವ ಎನ್‌ಎಸ್‌ಟಿ ಯಂತ್ರ ಇಸಿಜಿ, ಹೆರಿಗೆ ಸಮಯದಲ್ಲಿ ರಕ್ತ ಸೋರುವಿಕೆ ನಿಯಂತ್ರಿಸುವ ಯಂತ್ರಗಳನ್ನು ಸಿಎಸ್‌ಆರ್ ಫಂಡ್ ಮೂಲಕ ದೊರಕಿಸಿಕೊಟ್ಟಿದ್ದಾರೆ ಎಂದರು.ಜಿಲ್ಲೆಯಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯ ಒದಗಿಸಲು ಒತ್ತಾಯ
ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲೆಯಲ್ಲಿ ಹೆಚ್ಚಿನ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಜಿಲ್ಲೆಗೆ ಅಗತ್ಯವಿರುವ ವಿಭಾಗಗಳನ್ನು ಆರಂಭಿಸಲು ಮುಂದಾಗಬೇಕು ಎಂದು ರಾಷ್ಟ್ರೀಯ ಅಹಿಂದಾ ಸಂಘಟನೆಗಳ ಹೋರಾಟ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಎಂ.ನಿಂಗಯ್ಯ ಮನವಿ ಮಾಡಿದರು.
ಜಿಲ್ಲೆಯಲ್ಲಿ ೧೫ ಲಕ್ಷಕ್ಕೂ ಹೆಚ್ಚು ಮಂದಿಯ ಆರೋಗ್ಯದ ದೃಷ್ಠಿಯಿಂದ ಜಿಲ್ಲೆಯ ಹೊರಗೆ ಅವಲಂಭಿತವಾಗಿರುವ ಅಗತ್ಯ ಆರೋಗ್ಯ ಕೇಂದ್ರಗಳನ್ನು ತೆರೆಯಲು ಸರ್ಕಾರ ಜವಾಬ್ದಾರಿ ತೋರಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.ಬೆಂಗಳೂರಿನ ನಿಮ್ಹಾನ್ಸ್ ರೀತಿಯ ಆಸ್ಪತ್ರೆಯನ್ನು ಪ್ರಸಕ್ತ ಸಾಲಿನ ಅಂತ್ಯದೊಳಗೆ ಜಿಲ್ಲೆಯಲ್ಲಿ ತೆರೆಯಬೇಕು. ರಾಷ್ಟ್ರೀಯಆಯುಷ್ ಮಿಷನ್ ಯೋಜನೆಯಡಿ ರಾಜ್ಯದ ಎರಡನೇ ಸರ್ಕಾರಿ ಪ್ರಕೃತಿ ಚಿಕಿತ್ಸಾ ಕೇಂದ್ರ ಹಾಗೂ ಕಾಲೇಜನ್ನು ಮಂಡ್ಯದಲ್ಲಿ ಆರಂಭಿಸುವಂತೆ ಒತ್ತಾಯಿಸಿದರು.
ಗೋಷ್ಠಿಯಲ್ಲಿ ರಮಾನಂದ, ವಿಶ್ವ ಇದ್ದರು.