ಸಾರಾಂಶ
ಮಂಡ್ಯ : ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಮೂರು ದಿನಗಳ ಕಾಲ ಹಲವು ಗೋಷ್ಢಿಗಳಲ್ಲಿ ವಿವಿಧ ವಿಷಯ ಕುರಿತು ನಾಡಿನ ಹಿರಿ-ಕಿರಿಯ ಸಾಹಿತಿಗಳು, ಸಾಹಿತ್ಯಾಸಕ್ತರು ಚಿಂತನ ಮಂಥನ ನಡೆಸಿದ ನಂತರ ಐದು ಪ್ರಮುಖ ನಿರ್ಣಯಗಳನ್ನು ಕಗೊಳ್ಳಲಾಗಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಎಲ್ಲಾ ಉಪಬಂಧಗಳು ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಸಮಗ್ರವಾಗಿ ಜಾರಿಗೆ ಬರಬೇಕಿದ್ದು, ಕೂಡಲೇ ಅನುಷ್ಠಾನ ಮಾಡಬೇಕು. ಸ್ವಾಯತ್ತೆ ಹೊಂದಿರುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ರಾಜ್ಯಮಟ್ಟದ ಸಮಿತಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಸೂಕ್ತ ತಿದ್ದುಪಡಿ ತರಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಯಿತು.
ರಾಜ್ಯದಲ್ಲಿರುವ ಸರ್ಕಾರದ ಎಲ್ಲಾ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿ ಇತರೆ ಮೂಲಸೌಕರ್ಯಗಳನ್ನು ಒದಗಿಸಬೇಕು ಮತ್ತು ಖಾಲಿ ಇರುವ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಕನ್ನಡ ಅನ್ನದ ಭಾಷೆಯಾಗಲು, ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಪಕವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿ ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು ಎಂದು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಯಿತು.ದಾವಣಗೆರೆಯಲ್ಲಿ ನಡೆಯಬೇಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತಿ ಶೀಘ್ರದಲ್ಲಿ ನಡೆಸಬೇಕು ಎಂದು ಒತ್ತಾಯಿಸಲಾಯಿತು. ಕರ್ನಾಟಕ ಸರ್ಕಾರವು ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲಿ ಘೋಷಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಯಿತು.
- ವಿಶ್ವ ಕನ್ನಡ ಸಮ್ಮೇಳನ ಶೀಘ್ರ ಆಯೋಜನೆಗೆ ಆಗ್ರಹ- ಸಕ್ಕರೆ ನಾಡಿನಿಂದ ಗಣಿನಾಡಿಗೆ ಸಮ್ಮೇಳನ ವರ್ಗ
ಪ್ರಮುಖ ನಿರ್ಣಯಗಳು
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಸಮಗ್ರವಾಗಿ ಜಾರಿಗೆ ಬರಬೇಕು. ಕಸಾಪ ಅಧ್ಯಕ್ಷರು ಅಧಿನಿಯಮದ ರಾಜ್ಯ ಸಮಿತಿ ಉಪಾಧ್ಯಕ್ಷರಾಗಬೇಕು- ಸರ್ಕಾರದ ಎಲ್ಲ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿ ಎಲ್ಲ ಮೂಲಸೌಕರ್ಯ ಒದಗಿಸಬೇಕು. ಖಾಲಿ ಶಿಕ್ಷಕ ಹುದ್ದೆ ಭರ್ತಿ ಮಾಡಬೇಕು. ಕನ್ನಡೇತರ ಶಾಲೆಗೆ ಕನ್ನಡ ಶಿಕ್ಷಕರನ್ನು ನೇಮಿಸಬೇಕು- ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿರುವ, ನ್ಯಾಯಾಲಯದಲ್ಲಿರುವ ಬಾಕಿ ಪ್ರಕರಣ ಎದುರಿಸಬೇಕು. ಮಹಿಷಿ ವರದಿ ಜಾರಿ ಮಾಡಬೇಕು - ದಾವಣಗೆರೆ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶೀಘ್ರ ನಡೆಸಬೇಕು. ರಾಷ್ಟ್ರಕವಿಯನ್ನು ಬೇಗ ಘೋಷಿಸಬೇಕು
ಪ್ರಮುಖ ನಿರ್ಣಯಗಳು
1. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವು ಸಮಗ್ರವಾಗಿ ಕೂಡಲೇ ಅನುಷ್ಠಾನ ಆಗಬೇಕು. ಕಸಾಪ ಅಧ್ಯಕ್ಷರನ್ನು ಅಧಿನಿಯಮ 2022ರ ರಾಜ್ಯಮಟ್ಟದ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬೇಕು
2. ರಾಜ್ಯದಲ್ಲಿರುವ ಸರ್ಕಾರದ ಎಲ್ಲಾ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿ ಇತರೆ ಮೂಲಸೌಕರ್ಯಗಳನ್ನು ಒದಗಿಸಲು ಮತ್ತು ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ನೇಮಕಾತಿಯ ಕ್ರಮಕ್ಕೆ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು.
3. ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಪಕವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು.
4. ದಾವಣಗೆರೆಯಲ್ಲಿ ನಡೆಯಬೇಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತಿ ಶೀಘ್ರದಲ್ಲಿ ನಡೆಸಬೇಕು.
5. ಕರ್ನಾಟಕ ಸರ್ಕಾರವು ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲಿ ಘೋಷಿಸಬೇಕು.