ಸಾರಾಂಶ
ಕನ್ನಡ ಉಪನ್ಯಾಸಕರಾಗಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು. ಅದರಂತೆ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ರವಿಕುಮಾರ್ ಚಾಮಲಾಪುರ ಅಗಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ್ (೫೧) ಸೋಮವಾರ ನಿಧನರಾದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಹೃದಯಘಾತದಿಂದ ಇಹಲೋಕ ತ್ಯಜಿಸಿದ್ದಾರೆ.ವರ್ಷದ ಹಿಂದೆ ಮನೆಯಲ್ಲಿ ಜಾರಿ ಬಿದ್ದು ಬೆನ್ನು ಹುರಿಗೆ ಹಾನಿಯಾಗಿದ್ದರಿಂದ ಹಾಸಿಗೆ ಹಿಡಿದಿದ್ದರು.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಮಂಡ್ಯದ ಕಾವೇರಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸ್ವ ಗ್ರಾಮ ಚಾಮಲಪುರದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.
ಕನ್ನಡ ಉಪನ್ಯಾಸಕರಾಗಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ ಎರಡನೇ ಅವಧಿಗೆ ಅಧ್ಯಕ್ಷರಾಗಿದ್ದರು, ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು, ಅದರಂತೆ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ಸಿದ್ಧತೆ ನಡೆದಿತ್ತು. ಅಷ್ಟರಲ್ಲಿ ರವಿಕುಮಾರ್ ಚಾಮಲಾಪುರ ಅಗಲಿದ್ದಾರೆ.ಸಚಿವರಿಂದ ಅಂತಿಮ ನಮನ:
ಇಂದು ವಿವಶರಾದ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರವಿಕುಮಾರ್ ಚಾಮಲಾಪುರ ಅವರ ಅಂತಿಮ ದರ್ಶನವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಂತಿಮ ನಮನ ಸಲ್ಲಿಸಿದರು.ಇದೇ ವೇಳೆ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಶಾಸಕ ಪಿ.ರವಿಕುಮಾರ್, ಅಪರ ಜಿಲ್ಲಾಕಾರಿ ಡಾ.ಎಚ್.ಎಲ್.ನಾಗರಾಜು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಕಸಾಪ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ್ ನಿಧನಕ್ಕೆ ಸಂತಾಪಶ್ರೀರಂಗಪಟ್ಟಣ:ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿ.ಕೆ.ರವಿಕುಮಾರ್ ಚಾಮಲಾಪುರ ನಿಧನ ಹಿನ್ನೆಲೆಯಲ್ಲಿ ಕಸಾಪ ತಾಲೂಕು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.ಮೃತ ರವಿಕುಮಾರ್ ಕನ್ನಡ ಉಪನ್ಯಾಸಕರಾಗಿ, ಕಾಸಪ ಜಿಲ್ಲಾಧ್ಯಕ್ಷರಾಗಿ ಎರಡನೇ ಅವಧಿಗೆ ಆಯ್ಕೆಯಾಗಿದ್ದರು. ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉತ್ಸುಕರಾಗಿದ್ದರು. ಅಷ್ಟರಲ್ಲಿ ರವಿಕುಮಾರ್ ಅವರಿಗೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ. ಇದರಿಂದ ಜಿಲ್ಲಾ ಕಸಾಪಗೆ ತುಂಬಲಾರದ ನಷ್ಟವಾಗಿದೆ ಎಂದು ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.ತಾಲೂಕು ಕಸಾಪ ಅಧ್ಯಕ್ಷ ಬಲ್ಲೇನಹಳ್ಳಿ ಮಂಜುನಾಥ, ಉಪಾಧ್ಯಕ್ಷ ಎಂ.ಬಿ.ಕುಮಾರ್, ಪ್ರಧಾನ ಕಾರ್ಯದರ್ಶಿ ದೇವರಾಜು ಗೌಡಹಳ್ಳಿ, ಖಜಾಂಚಿ ಬಸವರಾಜು, ಮಾಜಿ ಅಧ್ಯಕ್ಷ ಪುರುಷೋತ್ತಮ ಚಿಕ್ಕ ಪಾಳ್ಯ, ಸಿ.ಸ್ವಾಮೀಗೌಡ, ಬೆಳಗೊಳ ಹೋಬಳಿ ಅಧ್ಯಕ್ಷ ಶೇಖರ್, ನಗರಾಧ್ಯಕ್ಷೆ ಸರಸ್ವತಿ ಪಶ್ಚಿವಾಹಿನಿ, ಕಸಬಾ ಹೋಬಳಿ ಚಂದಗಾಲು ಶಂಕರ್, ಕೆ.ಶೆಟ್ಟಹಳ್ಳಿ ಹೋಬಳಿ ಲೋಕೇಶ್ ಸೇರಿದಂತೆ ಇತರ ಪದಾಧಿಕಾರಿಗಳು ಸಂತಾಪ ಸೂಚಿಸಿ ಕಂಬನಿ ಗೆರೆದರು.ಹಲಗೂರು ಕಸಾಪದಿಂದ ಸಂತಾಪಹಲಗೂರು: ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ರವಿ ಚಾಮಲಾಪುರ ನಿಧನಕ್ಕೆ ದಡಮಳ್ಳಿ ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಕಸಾಪ ಸದಸ್ಯ ಡಿ. ರಾಮು ಸಂತಾಪ ಸೂಚಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಜಿಲ್ಲೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತರುವುದರಲ್ಲಿ ತುಂಬಾ ಶ್ರಮಿಸಿದ್ದರು. ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ. ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.