ಸಾರಾಂಶ
ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಹಿರಿಯ ಪತ್ರಕರ್ತ ಕೆ.ಎನ್.ರವಿ ಅವರಿಗೆ ನೀಡಿ ಗೌರವಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ವಹಿಸುವರು.
ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ, ಜೀವಮಾನಸಾಧನೆ, ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಸೆ.೨೯ರಂದು ಬೆಳಗ್ಗೆ ೧೦.೩೦ಕ್ಕೆ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ.ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೆರವೇರಿಸಲಿದ್ದು, ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಹಿರಿಯ ಪತ್ರಕರ್ತ ಕೆ.ಎನ್.ರವಿ ಅವರಿಗೆ ನೀಡಿ ಗೌರವಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ವಹಿಸುವರು.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಿದ್ದು, ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡುವರು. ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಧಾನ ಭಾಷಣ ಮಾಡುವರು. ಕ್ರೀಡಾಕೂಟ ವಿಜೇತರಿಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಬಹುಮಾನ ವಿತರಿಸುವರು. ಶಾಸಕರಾದ ಪಿ.ರವಿಕುಮಾರ್, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ ಉಪಸ್ಥಿತರಿರಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷ ನಾಗೇಶ್, ವಾರ್ತಾಧಿಕಾರ ಎಚ್.ಎಸ್.ನಿರ್ಮಲಾ ಭಾಗವಹಿಸುವರು.ಪತ್ರಕರ್ತರಾದ ಎಲ್.ಕೃಷ್ಣ, ಎಸ್.ಡಿ.ವೇಣುಗೋಪಾಲ್, ಎಂ.ಆರ್.ಚಕ್ರಪಾಣಿ, ದೀಪಕ್, ಶಿವಮಲ್ಲು ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.