ಮಂಡ್ಯ: ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ಅಸ್ತಿತ್ವಕ್ಕೆ

| Published : Feb 20 2025, 12:46 AM IST

ಸಾರಾಂಶ

ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್‌ನ್ನು ಅಸ್ತಿತ್ವಕ್ಕೆ ತರಲಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಆಸಕ್ತ, ಅಗತ್ಯವಿರುವವರಿಗೆ ನೆರವು.

ಕನ್ನಡಪ್ರಭ ವಾರ್ತೆ ಮಂಡ್ಯ

ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸೇವಾ ಮನೋಭಾವದಿಂದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್‌ನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಅಧ್ಯಕ್ಷ ಮಹಾಲಿಂಗಪ್ಪ ತಿಳಿಸಿದರು.

ಈ ಫೌಂಡೇಶನ್ ಮುಖಾಂತರ ನಾಡಿನಾದ್ಯಂತ ಇರುವ ಹಾಗೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ಆಸಕ್ತ, ಅಗತ್ಯವಿರುವವರಿಗೆ ನೆರವಾಗಲು ಈ ಫೌಂಡೇಶನ್ ಸ್ಥಾಪಿಸಿರುವುದಾಗಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಶೇಷವಾಗಿ ಗ್ರಾಮೀಣ ಪ್ರದೇಶದ ಆಸಕ್ತ ೧೦೦೦ ಜನಕ್ಕೆ ದ್ವಿಚಕ್ರ ವಾಹನ ಸವಾರರಿಗೆ ಉಚಿತವಾಗಿ ಅಪಘಾತ ಮತ್ತು ಆರೋಗ್ಯ ವಿಮೆ, ಪರಿಸರ ಸಂರಕ್ಷಣೆ ಕುರಿತು ರಚನಾತ್ಮಕವಾಗಿ ಜಾಗೃತಿ ಮೂಡಿಸುವುದು. ಮೊದಲ ಹಂತವಾಗಿ ಒಂದು ಲಕ್ಷ ಸಸಿಗಳನ್ನು ನೆಟ್ಟು ಬೆಳೆಸಲು ಕಾರ್ಯಕ್ರಮ ರೂಪಿಸಿರುವುದಾಗಿ ಹೇಳಿದರು.

ಗ್ರಾಮೀಣ ಮತ್ತು ನಗರ ಭಾಗದ ಲ್ಲಿ ಶೈಕ್ಷಣಿಕ ವಿದ್ಯಾಭ್ಯಾಸ ವಂಚಿತ ಮಕ್ಕಳಿಗೆ ನೆರವು, ಉಚಿತವಾಗಿ ಶಿಕ್ಷಣ ಕೊಡಿಸುವುದು. ಗ್ರಾಮೀಣ ಮತ್ತು ನಗರ ಪ್ರದೇಶಗಳ ವಿದ್ಯಾವಂತ ನಿರುದ್ಯೋಗಿಗಳಿಗೆ ರಾಜ್ಯ ವರರಾಜ್ಯ ಹೊರದೇಶಗಳಲ್ಲಿ ಉದ್ಯೋಗವಕಾಶ ಕಲ್ಪಿಸುವುದು ಮಾಹಿತಿ ನೀಡುವುದು ನಗರ ಮತ್ತು ಗ್ರಾಮೀಣ ಭಾಗದಲ್ಲಿ ವಾಸಿಸಲು ಮನೆ ಇಲ್ಲದ ಆಸಕ್ತ ಅಗತ್ಯ ವಿರುವವರಿಗೆ ಮನೆ ಕಟ್ಟಲು ನೆರವು ನೀಡುವ ಉದ್ದೇಶ ಹೊಂದಿರುವುದಾಗಿ ತಿಳಿಸಿದರು.

ಕೃಷಿಕರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ನಿಖರ ಮಾಹಿತಿಯನ್ನು ನೀಡುವುದು ಆಸಕ್ತ ಅಗತ್ಯ ಇರುವ ರೈತರಿಗೆ ಉಪಕರಣಗಳನ್ನು ಉಚಿತವಾಗಿ ನೀಡುವುದು ಅಗತ್ಯವಿರುವವರು ಕಚೇರಿ ಹಾಗೂ ಫೌಂಡೇಷನ್ ಪದಾಧಿಕಾರಿಗಳನ್ನು ಭೇಟಿ ಮಾಡುವಂತೆ ಹೇಳಿದರು.

ಗೋಷ್ಠಿಯಲ್ಲಿ ಶಿವಕುಮಾರ್, ಎಸ್.ಚಂದು, ರವಿಗೌಡ ಇತರರಿದ್ದರು.

ನಾಗಮಂಗಲದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ ನಿರ್ಮಾಣಕ್ಕೆ ಅನುಮೋದನೆ

ಕನ್ನಡಪ್ರಭ ವಾರ್ತೆ ಮಂಡ್ಯ

2023-24ನೇ ಸಾಲಿನ ರಸ್ತೆ ಸುರಕ್ಷತಾ ನಿಧಿಯ ಕ್ರಿಯಾ ಯೋಜನೆಯಡಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು ನಾಗಮಂಗಲದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ನಾಗಮಂಗಲ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಕಾಮಗಾರಿಯನ್ನು 6.98 ಕೋಟಿ ರು.ಅಂದಾಜು ವೆಚ್ಚದಲ್ಲಿ ಬೆಂಗಳೂರು ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ವತಿಯಿಂದ ಕೈಗೊಳ್ಳಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.