ಸಾರಾಂಶ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್‌ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ.
ಮದ್ದೂರು: ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರುಪಾಯಿಯನ್ನು ಆನ್‌ಲೈನ್ ಮೂಲಕ ವಂಚಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರುಗಿದೆ.
ತಾಲೂಕಿನ ಕೊಪ್ಪ ಹೋಬಳಿ ರಾಂಪುರ ಗ್ರಾಮದ ರೈತ ಚಂದ್ರಶೇಖರ್ ಅವರ ಸೇವಿಂಗ್ಸ್ ಖಾತೆಯಲ್ಲಿದ್ದ ₹1.60 ಕೋಟಿಯನ್ನು ಗ್ರಾಹಕರ ಗಮನಕ್ಕೆ ಬಾರದೇ ಯುಪಿಐ ಸಂಪರ್ಕ ಸಾಧಿಸಿ ವಂಚಕರು ಪಂಗನಾಮ ಹಾಕಿದ್ದಾರೆ.
ಈ ಪ್ರಕರಣ ಕುರಿತು ಚಂದ್ರಶೇಖರ್ ಮಂಡ್ಯ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆನ್‌ಲೈನ್ ವಂಚಕರು ಯುಪಿಐ ಕೋಡ್ ಬಳಸಿ ಜು.24ರಂದು ₹1.10ಕೋಟಿ, ನಂತರ ಜು.27ಕ್ಕೆ ₹49,99,299 ಲಕ್ಷ ಸೇರಿದಂತೆ ₹1.60 ಲಕ್ಷವನ್ನು ಹಂತ ಹಂತವಾಗಿ ಲಪಟಾಯಿಸಲಾಗಿದೆ ಎಂದು ರೈತ ಚಂದ್ರಶೇಖರ್ ಆರೋಪಿಸಿದ್ದಾರೆ. ಮಂಡ್ಯ ಸೈಬರ್ ಕ್ರೈಂ ಪೊಲೀಸರು ಬಿಎನ್‌ಎಸ್ ಕಾಯ್ದೆ 2023ರನ್ವಯ 318, 319 ರೀತ್ಯ ಪ್ರಕರಣ ದಾಖಲಿಸಿದ್ದಾರೆ.