ಇಂದಿನ ಕೃಷಿ ಸಚಿವರ ಸಭೆಗೆ ವಿವಿಧ ಸಂಘಟನೆಗಳಿಂದ ಬಹಿಷ್ಕಾರಕೃಷ್ಣರಾಜಸಾಗರ ಅಣೆಕಟ್ಟು ಬಳಿ ರಾಜ್ಯ ಸರ್ಕಾರ ಜಾರಿಗೊಳಿಸಲುದ್ದೇಶಿಸಿರುವ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆಗಳಿಗೆ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಸರ್ವಾನುಮತದ ವಿರೋಧ ವ್ಯಕ್ತಪಡಿಸಿದ್ದು, (ಜೂ.೨೫) ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಕರೆದಿರುವ ಸಭೆಯನ್ನು ಬಹಿಷ್ಕರಿಸಲು ರೈತ, ದಲಿತ, ಪ್ರಗತಿಪರ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ತೀರ್ಮಾನ ಕೈಗೊಂಡಿದ್ದಾರೆ.