ಗೊಲ್ಲರಹಳ್ಳಿಯಿಂದ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಭಕ್ತರುಹಲಗೂರು ಗ್ರಾಮದ ಶ್ರೀಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಗೊಲ್ಲರಹಳ್ಳಿ, ನಂಜಾಪುರ, ಮಡಳ್ಳಿ, ಮರಿಗೌಡನ ದೊಡ್ಡಿ, ಗಾಣಾಳು ಮತ್ತು ಹಲಗೂರು ಸೇರಿದಂತೆ ವಿವಿಧ ಗ್ರಾಮಗಳ ಮಾದಪ್ಪನ ಸಾವಿರಾರು ಭಕ್ತಾದಿಗಳು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಉಘೇ ಮಾದಪ್ಪ ಉಘೇ ಮಾದಪ್ಪ ಎಂಬ ಘೋಷಣೆಗಳನ್ನು ಕೂಗುತ್ತಾ ಬೆಳಗ್ಗೆ ಪಾದಯಾತ್ರೆ ಮೂಲಕ ತೆರಳಿದರು.