ವಿವಿಧ ಪ್ರಮಾಣಪತ್ರ ಪಡೆಯಲು ಜನರ ಅಲೆದಾಟ..!ಕಳೆದ ಹನ್ನೆರಡು ದಿನಗಳಿಂದ ತಾಲೂಕು, ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಗ್ರಾಮಾಡಳಿತಾಧಿಕಾರಿಗಳು ತಮ್ಮ ಸಮಸ್ಯೆ ಮತ್ತು ಬೇಡಿಕೆ ಈಡೇರಿಕೆಗಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ರೈತರು, ಸಾರ್ವಜನಿಕರು, ವಿದ್ಯಾರ್ಥಿಗಳು ತಮ್ಮ ಜಾತಿ, ಆದಾಯ, ಒಬಿಸಿ, ವಾಸಸ್ಥಳ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.