ಬೇಸಿಗೆ ಬೆಳೆಗೆ ನೀರು ಹರಿಸುವಂತೆ, ನಾಲೆ ಕಳಪೆ ಕಾಮಗಾರಿ ಸಮಗ್ರ ತನಿಖೆಗೆ ಒತ್ತಾಯಕೆಆರ್ಎಸ್ ಜಲಾನಯನ ಪ್ರದೇಶದ ರೈತರಿಗೆ ಬೇಸಿಗೆ ಬೆಳೆಗೆ ನೀರು ಹರಿಸಿದ ರಾಜ್ಯ ಸರ್ಕಾರ ಹೇಮಾವತಿ ಜಲಾನಯನ ಪ್ರದೇಶದ ರೈತರ ಬಗ್ಗೆ ತನ್ನ ಕಾಳಜಿ ಪ್ರದರ್ಶಿಸಿಲ್ಲ. ಹೇಮಾವತಿ ಜಲಾಶಯದ ಎಡದಂಡೆ ನಾಲೆ ಮತ್ತು ನದಿ ಅಣೆಕಟ್ಟೆ ನಾಲೆಗಳಾದ ಮಂದಗೆರೆ ಎಡ ಮತ್ತು ಬಲದಂಡೆ ನಾಲೆಗಳು, ಹೇಮಗಿರಿ ನಾಲಾ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವ ಬೆಳೆ ಬೆಳೆಯಬೇಕೆಂಬ ಗೊಂದಲದಲ್ಲಿದ್ದಾರೆ.