ಮನ್‌ಮುಲ್: ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಪ್ರಕಟಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ ತಾಲೂಕುಗಳ ಫಲಿತಾಂಶ ಘೋಷಣೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಾಗಾಗಿ ತಾಲೂಕುಗಳಲ್ಲಿರುವ ಐದು ಸ್ಥಾನಗಳ ಮತ ಎಣಿಗೆ ಪೂರ್ಣಗೊಂಡಿದ್ದು, ಫಲಿತಾಂಶ ಘೋಷಣೆಯಷ್ಟೇ ಬಾಕಿ ಉಳಿದಿದೆ. ಉಳಿದಂತೆ ಮಂಡ್ಯ, ಪಾಂಡವಪುರದಲ್ಲಿ ಜೆಡಿಎಸ್ ಮೇಲುಗೈ ಸಾಧಿಸಿದ್ದರೆ ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ.