ಕೃಷಿಕರು, ಬಡ, ಮಧ್ಯಮ ವರ್ಗದ ಬಗ್ಗೆ ಬಜೆಟ್‌ನಲ್ಲಿ ಅತಿಹೆಚ್ಚು ಕಾಳಜಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿಯಾಗಿದೆ. ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ರೈತನ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳನ್ನು ಬಜೆಟ್‌ನಲ್ಲಿ ಕೈಗೊಳ್ಳಲಾಗಿದೆ.