ಪಾದಚಾರಿ ರಸ್ತೆ ಅಥವಾ ಮೇಲ್ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆಬೆಂಗಳೂರು, ಕನಕಪುರ, ಹಲಗೂರು, ಮಳವಳ್ಳಿ ಮೂಲಕ ಕೊಳ್ಳೇಗಾಲ, ಕೇರಳ, ತಮಿಳುನಾಡು ಸಂಪರ್ಕಿಸಲು ನಿರ್ಮಿಸಿರುವ 209 ರಾಷ್ಟ್ರೀಯ ಹೆದ್ದಾರಿಯ ಹಲಗೂರು ಮುತ್ತತ್ತಿ ರಸ್ತೆ, ಗೊಲ್ಲರಹಳ್ಳಿ ಬಳಿ ಹೆದ್ದಾರಿಯಲ್ಲಿ ಪ್ರಯಾಣಿಸುವ ವೇಳೆ ಈಗಾಗಲೇ 125ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ 18ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇದಕ್ಕೆ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ.