ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಒಗ್ಗಟ್ಟು ಪ್ರದರ್ಶಿಸಿ: ಸಿ.ಎಸ್.ಪುಟ್ಟರಾಜುಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಬಗ್ಗೆ ಚರ್ಚಿಸುವುದು ಬೇಡ, ಚುನಾವಣೆ ಮುಗಿದ ಒಂದೇ ವರ್ಷದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನತೆ ತಮ್ಮ ಶಕ್ತಿಯನ್ನು ತೋರಿಸಿದ್ದಾರೆ. ಇದೀಗ ಎದುರಾಗಿರುವ ಮನ್‌ಮುಲ್, ಪಿಎಲ್‌ಡಿ ಬ್ಯಾಂಕ್ ಹಾಗೂ ಸ್ಥಳೀಯ ಸಂಸ್ಥೆಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಎಲ್ಲರೂ ಒಗ್ಗಟ್ಟಿನಿಂದ ವೈಮನಸ್ಸು ಬಿಟ್ಟು ಗೆಲ್ಲಿಸುವ ಮೂಲಕ ಪಕ್ಷ ಬಲಪಡಿಸುವ ಕೆಲಸ ಮಾಡಬೇಕು.