ಒಳಮೀಸಲಾತಿ ಸಮೀಕ್ಷೆಯನ್ನು ಚುರುಕುಗೊಳಿಸಿ: ಜಿಲ್ಲಾಧಿಕಾರಿ ಡಾ.ಕುಮಾರ೨೦೧೧ ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ ೬೧,೪೨೩ ಪರಿಶಿಷ್ಟ ಜಾತಿಯ ಮನೆಗಳಿದ್ದು, ೧೫,೯೭೩ ಮನೆಗಳಿಗೆ ಮಾತ್ರ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ. ಪ್ರತಿ ದಿನ ಆಯಾ ತಾಲೂಕಿನ ತಹಸೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಗತಿ ಕುರಿತು ಪರಿಶೀಲನೆ ನಡೆಸಿ ಶೇ.೧೦೦ ರಷ್ಟು ಸಾಧನೆ ಹಾಗೂ ಆಯಾ ದಿನ ನಿಗದಿಪಡಿಸಿರುವ ಗುರಿ ಸಾಧಿಸಬೇಕು ಎಂದು ನಿರ್ದೇಶನ ನೀಡಬೇಕು.