ಸಹಕಾರ ಸಂಘಗಳು ರೈತರು, ಸಾರ್ವಜನಿಕರಿಗೆ ಸಾಲ ಸೌಲಭ್ಯ ನೀಡಿಸಹಕಾರ ಸಂಘಗಳ ಅಭಿವೃದ್ಧಿಗೆ ಆಡಳಿತ ಮಂಡಳಿಗಳು ಸಹಕರಿಸಬೇಕು, ಸಂಘಗಳಲ್ಲಿ ರಾಜಕೀಯ ಬದಿಗೊತ್ತಿ ಒಗ್ಗಟ್ಟಿನಿಂದ ಕೆಲಸ ಮಾಡಿ ಸಂಘಗಳ ಅಭಿವೃದ್ಧಿಗೆ ಮುಂದಾಗಬೇಕು. ಚಿಕ್ಕಾಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಿಂದಿನ ಆಡಳಿತ ಮಂಡಳಿಯಲ್ಲಿ ನಡೆದಿದ್ದ ಭ್ರಷ್ಟಾಚಾರವನ್ನು ಗ್ರಾಮಸ್ಥರು ಎಲ್ಲರೂ ಸೇರಿ ಕ್ರಮವಹಿಸುವ ಮೂಲಕ ಸರಿಪಡಿಸಿರುವುದು ಖುಷಿಯ ವಿಚಾರ.