ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕುಮಾರ್ ದಿಢೀರ್ ಭೇಟಿ:ವೈದ್ಯಾಧಿಕಾರಿಗಳು, ಸಿಬ್ಬಂದಿಗೆ ಸ್ಥಳದಲ್ಲೇ ತರಾಟೆಜೂನ್ ಮಾಹೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರು ಸಭೆ ನಡೆಸಿದಾಗ ೩ ತಿಂಗಳೊಳಗೆ ಕ್ಯಾನ್ಸರ್ ಆಸ್ಪತ್ರೆ ಕೆಲಸ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರು. ಇದುವರೆಗೂ ಪೂರ್ಣಗೊಳ್ಳದಿರುವುದಕ್ಕೆ ಕಾರಣವೇನು. ಫೆಬ್ರವರಿ ಅಂತ್ಯದೊಳಗೆ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶಿಸಿದರು. ಸಿಟಿ ಸ್ಕ್ಯಾನ್, ಎಂಆರ್‌ಐ, ಅಲ್ಟ್ರಾಸೌಂಡ್, ಡಯಾಲಿಸಿಸ್, ಆ್ಯಂಬ್ಯುಲೆನ್ಸ್, ಮಿಮ್ಸ್‌ನಲ್ಲಿ ನಡೆಯುತ್ತಿರುವ ಕ್ರಿಟಿಕಲ್ ಕೇರ್ ಯುನಿಟ್, ಗ್ರಂಥಾಲಯ, ಆರೋಗ್ಯ ಧಾಮ, ಹೊರಗುತ್ತಿಗೆ ನೌಕರರಿಗೆ ಪಿಎಫ್ ಪಾವತಿ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.