ಶ್ರೀರಂಗನಾಥನ ದರ್ಶನಕ್ಕೆ ಬಂದ ಸಹಸ್ರಾರು ಭಕ್ತರುಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಾಲಯ ಹಾಗೂ ತಾಲೂಕಿನ ಕರೀಘಟ್ಟದಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಅರ್ಚಕರು ದೇವರಿಗೆ ಹೋಮ, ಹವನ, ಅಭಿಷೇಕ, ನೈವೇದ್ಯ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಿ, ವಿವಿಧ ಬಗೆಯ ಹೂಗಳಿಂದ ಅಲಂಕರಿಸಿದ್ದರು. ನಂತರ ಮಹಾಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದ ವಿತರಣೆ ಮಾಡಿದರು.