ಪಟ್ಟಲದಮ್ಮ ದೇವರ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಹಲಗೂರು ಮತ್ತು ವಳಗೆರೆದೊಡ್ಡಿ ಎರಡು ಗ್ರಾಮಗಳ ಆರಾಧ್ಯ ದೇವತೆ ಶ್ರೀಪಟ್ಟಲದಮ್ಮನ ಜಾತ್ರಾ ಮಹೋತ್ಸವ ಏ.16 ರಿಂದ 20ರವರೆಗೆ ನಡೆಯಲಿದೆ. ನಾಲ್ಕು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಗ್ರಾಮಸ್ಥರು ನಿರ್ಧಿಸಿದ್ದು, ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಗ್ರಾಮಕ್ಕೆ, ದೇಗುಲಗಳಿಗೆ ವಿದ್ಯುತ್ ದೀಪಾಲಂಕಾರಗಳನ್ನು ಮಾಡಲಾಗಿದೆ.