6 ಕವನಗಳು ಬೇಗ ಮುಗಿದವು, ಮತ್ತಾರು ಕವನಕ್ಕೆ ಶಿಳ್ಳೆ, ಚಪ್ಪಾಳೆ ಬಿದ್ದವುಧರ್ಮಾಂಧತೆ, ಶಬರಿಮೆಲೆಗೆ ಮಹಿಳಾ ಪ್ರವೇಶ ನಿಷೇಧ, ಭ್ರಷ್ಟಾಚಾರ, ಪ್ರಾಕೃತಿಕ ದೌರ್ಜನ್ಯ, ಭ್ರೂಣಹತ್ಯೆ, ಬಾಣಂತಿ ಮರಣ, ಪ್ರವಾಹ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಅಂಬೇಡ್ಕರ್ ಮತ್ತಿತರ ಹತ್ತು ಹಲವು ವಿಚಾರಗಳು ಕವನ ರೂಪಕಗಳಾಗಿ ಪ್ರಸ್ತುತಗೊಂಡವು. ಸಮಾನಾಂತರ ಸಭಾಂಗಣ ಮಧ್ಯಾಹ್ನದ ಹಸಿವಿನ ವೇಳೆಯಲ್ಲೂ ಆರಂಭದಲ್ಲಿ ಪೂರ್ತಿಯಾಗಿ ಕೊನೆ ಕೊನೆಗೆ ಭಾಗಶಃ ಭರ್ತಿಯಾಗಿ ಸಕ್ರಿಯ ಪ್ರೋತ್ಸಾಹ ಗಳಿಸಿತು.