ಶಾಲಾ ಕಾಲೇಜು ಆವರಣದಲ್ಲಿ ತಂಬಾಕು ಮಾರಾಟ ನಿಷೇಧಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜು, ಸಾರ್ವಜನಿಕ ಆವರಣದ ಬಳಿ 100 ಮೀಟರ್ ಅಂತರದ ಒಳಗೆ ತಂಬಾಕು ಮಾರಾಟ ಮಾಡುವ ಅಂಗಡಿಗಳು ಇದ್ದರೆ ಅವರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಗಳ ಬಗ್ಗೆ ಅರಿವು ಮೂಡಿಸಿ ಇದರ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿ ಜಿಲ್ಲೆಯನ್ನು ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು.