ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬೇಕೆಬೇಕು..!ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೇ, ಮಾಂಸಹಾರ ಸೇವನೆ ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ.