ಮಂಡ್ಯ ಜಿಲ್ಲಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮಹಬ್ಬದ ಮುನ್ನಾ ದಿನವಾದ ಸೋಮವಾರ ಮಂಡ್ಯ ನಗರದ ಪೇಟೆಬೀದಿ, ಮಾರುಕಟ್ಟೆ ರಸ್ತೆ, ವಿಶ್ವೇಶ್ವರಯ್ಯ ರಸ್ತೆ, ಹೊಸಹಳ್ಳಿ ಸರ್ಕಲ್, ಹೊಳಲು ವೃತ್ತ ಜನ ಜಂಗುಳಿಯಿಂದ ತುಂಬಿಹೋಗಿತ್ತು. ಹಬ್ಬದ ಸಾಮಾನುಗಳ ಖರೀದಿ ಭರಾಟೆ ಜೋರಾಗಿ ನಡೆದಿತ್ತು. ವರ್ತಕರು-ವ್ಯಾಪಾರಸ್ಥರೆಲ್ಲರೂ ಮಾರಾಟದಲ್ಲಿ ಬ್ಯುಸಿಯಾಗಿದ್ದರು.