ಬೆಟ್ಟದ ಅರಸಮ್ಮನ ಪುಣ್ಯ ಕ್ಷೇತ್ರದಲ್ಲಿ ದೀಪಗಳನ್ನು ಬೆಳಗಿಸಿ ಭಕ್ತಿ ಸಮರ್ಪಣೆಮಂಡ್ಯ ಜಿಲ್ಲೆಯಲ್ಲಿ ಅಪಾರ ಭಕ್ತರನ್ನು ಒಳಗೊಂಡಿರುವ ಪುಣ್ಯಕ್ಷೇತ್ರದಲ್ಲಿ ಪ್ರತಿ ವರ್ಷ ಜಾತ್ರಾ ಮಹೋತ್ಸವ 7 ದಿನಗಳ ಕಾಲ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಹಲಗೂರು ಸೇರಿದಂತೆ ಗುಂಡಾಪುರ, ನಂದಿಪುರ, ಕೆಂಪಯ್ಯ ದೊಡ್ಡಿ, ದೇವಿರಹಳ್ಳಿ, ದಳವಾಯಿ ಕೋಡಿಹಳ್ಳಿ, ಬಸವನಹಳ್ಳಿ ಮತ್ತು ಇತರ ಗ್ರಾಮಗಳ ಆರಾಧ್ಯ ದೇವತೆ ಬೆಟ್ಟದರಸಮ್ಮ ತಾಯಿ ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.