ಮಳೆಯಿಂದ ಆಸ್ತಿ-ಪಾಸ್ತಿ ನಷ್ಟ: ರಾಷ್ಟ್ರೀಯ ವಿಪತ್ತು ನಿಧಿಯಿಂದ ಸಂತ್ರಸ್ತರಿಗೆ ಪರಿಹಾರಮದ್ದೂರು ತಾಲೂಕಿನಲ್ಲಿ ಮಳೆಯಿಂದಾಗಿ ನಿಲುವಾಗಿಲು ಗ್ರಾಮದಲ್ಲಿ 15ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲದೇ, ರೈತರ ಜಮೀನುಗಳಲ್ಲಿ ಬೆಳೆದಿದ್ದ ಭತ್ತ, ಕಬ್ಬು ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ರಾಷ್ಟೀಯ ವಿಪತ್ತು ನಿಧಿಯಿಂದ ಸೂಕ್ತ ಪರಿಹಾರ ನೀಡುವಂತೆ ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.