ಸರ್ಕಾರಿ ಜಾಗದಲ್ಲಿ ಅಕ್ರಮ ಬಡಾವಣೆ ನಿರ್ಮಾಣ: ಆರೋಪಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳು ಮೈಸೂರಿಗೆ ಹೊಂದಿಕೊಂಡಂತ್ತಿದ್ದು, ಜಮೀನುಗಳ ಬೆಲೆ ಗಗನಕ್ಕೇರಿದೆ. ಕೆಲ ಬಲಾಡ್ಯ ವ್ಯಕ್ತಿಗಳು ಸರ್ಕಾರಕ್ಕೆ ಸೇರಿದ ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ, ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದ್ದಾರೆ.