ಅಕ್ರಮ ದಂಧೆಗಳ ಕಡಿವಾಣಕ್ಕೆ ೧೫ ದಿನಗಳ ಗಡುವುಮಂಡ್ಯದಲ್ಲಿ ಬೆಟ್ಟಿಂಗ್ ದಂಧೆ ಮಾಡುವವರು ತಾವೇ ಬಡ್ಡಿಗೆ ಹಣವನ್ನು ನೀಡಿ, ಬಲಿಪಶುಗಳಿಂದ ಖಾಲಿ ಚೆಕ್‌ಗಳನ್ನು ಪಡೆದುಕೊಂಡು, ಮುಂದಿನ ದಿನಗಳಲ್ಲಿ ವೈಮನಸ್ಸು ಉಂಟಾದಾಗ, ಇದು ಬೆಟ್ಟಿಂಗ್ ದಂಧೆಯಲ್ಲ, ಹಣದ ವ್ಯವಹಾರ ಎಂದು ಪ್ರಕರಣವನ್ನೇ ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಈ ಬಗ್ಗೆ ಸಭೆ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.