ಅಯೋಡಿನ್ ಮನುಷ್ಯನ ಬೆಳವಣಿಗೆಗೆ ಅತ್ಯಗತ್ಯ: ಎಸ್.ಡಿ.ಬೆನ್ನೂರಉಪ್ಪು ಮಾನವನ ಜೀವನದಲ್ಲಿ ಅಮೂಲ್ಯವಾದ ನೈಸರ್ಗಿಕ ಪೋಷಕಾಂಶ. ಅಯೋಡಿನ್ ಕೊರತೆಯಿಂದ ಮಕ್ಕಳಲ್ಲಿ ಬುದ್ಧಿ ಮಾಂದ್ಯತೆ, ಕಲಿಕೆಯಲ್ಲಿ ಹಿಂದುಳಿಯುವಿಕೆ, ಸರಿಪಡಿಸಲಾಗದ ದೈಹಿಕ ಹಾಗೂ ಮಾನಸಿಕ ವಿಕಲತೆ, ಬೆಳವಣಿಗೆಯಲ್ಲಿ ಕುಂಠಿತ, ಕಿವುಡು ಹಾಗೂ ಮೂಕತನ, ಮೆಳ್ಳೆಗಣ್ಣು, ಕುಬ್ಜತನ, ನಡಿಗೆಯಲ್ಲಿ ಸರಿಪಡಿಸಲಾಗದಂತಹ ಲೋಪದೋಷಗಳು ಉಂಟಾಗುತ್ತವೆ.