ಮಂಡ್ಯ ಜಿಲ್ಲೆಯಲ್ಲಿ ಹಿಂಗಾರು ಚುರುಕು: ೨೭ ಮನೆಗಳು ಭಾಗಶಃ ಹಾನಿಮಂಡ್ಯ ಜಿಲ್ಲೆಯ ನಾಗಮಂಗಲ, ಮಳವಳ್ಳಿ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಕಂಡುಬಂದಿದೆ. ಮದ್ದೂರು ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ವಾಡಿಕೆಯಷ್ಟು ಮಳೆಯಾಗಿದೆ. ಉಳಿದಂತೆ ಕೆ.ಆರ್.ಪೇಟೆ, ಪಾಂಡವಪುರ, ಮಂಡ್ಯ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು ಕಂಡುಬಂದಿದೆ.