ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಲೋಕೋಪಯೋಗಿ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ, ಮರಳಗಾಲ, ದೊಡ್ಡಪಾಳ್ಯ, ಮಂಡ್ಯಕೊಪ್ಪಲು ವೃತ್ತ ಸೇರಿದಂತೆ ಗೆಂಡೆಹೊಸಳ್ಳಿ ಗ್ರಾಮದವರೆಗಿನ ರಸ್ತೆ ಸಂಪೂರ್ಣ ಗುಂಡಿ ಬಿದ್ದು, ಜೊತೆಗೆ ರಸ್ತೆಯ ಎರಡು ಬದಿಯಲ್ಲಿ ಗಿಡಗೆಂಟಿಗಳು ಬೆಳೆದು ತಿರುವುನಲ್ಲಿ ಬರುವ ವಾಹನಗಳು ಎದುರು ಬರುವ ವಾಹನ ಸವಾರರಿಗೆ ಕಾಣದೆ ಪ್ರತಿ ನಿತ್ಯ ಅಪಘಾತಗಳು ಸಂಭವಿಸುತ್ತಿವೆ.