ಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮೂವರು ನಾಮಪತ್ರ ಸಲ್ಲಿಕೆಕೆ.ಆರ್.ಪೇಟೆ ತಾಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂರು ಸ್ಥಾನಗಳಿಗೆ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಒಮ್ಮತದ ಅಭ್ಯರ್ಥಿಗಳಾಗಿ ತಾಲೂಕು ಯೋಜನಾಧಿಕಾರಿ ಶ್ರೀನಿವಾಸ್, ಆನೆಗೊಳ ಗ್ರಾಪಂ ಪಿಡಿಒ ರವಿಕುಮಾರ್ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ದ್ವಿತೀಯ ದರ್ಜೆ ಸಹಾಯಕ ರವಿಪ್ರಸನ್ನ ನಾಮಪತ್ರ ಸಲ್ಲಿಸಿದ್ದಾರೆ.