ಶೀಘ್ರ ಎಸ್.ಎಂ.ಕೃಷ್ಣರಿಗೆ ಶ್ರದ್ಧಾಂಜಲಿ ಸಭೆ: ಶಿವರಾಮೇಗೌಡಎಸ್.ಎಂ.ಕೃಷ್ಣರ ಶ್ರದ್ಧಾಂಜಲಿ ಸಭೆಯನ್ನು ನಗರದ ಅಂಬೇಡ್ಕರ್ ಭವನ ಅಥವಾ ಜಿಲ್ಲಾ ಸರ್ ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಬೇಕೆ ಎಂಬ ಬಗ್ಗೆ ಸಭೆಯಲ್ಲಿ ಕೋರ್ ಕಮಿಟಿ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು, ಮಾಜಿ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೊಡ್ಡದಾಗಿ ಕಾರ್ಯಕ್ರಮ ನಡೆಸಲಾಗುವುದು.