ರಾಜ್ಯಾದ್ಯಂತ 1.50 ಕೋಟಿ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಮಾಜಿ ಕೇಂದ್ರ ಸಚಿವ ಭಗವಂತ ಖೂಬಾಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ನಾಲ್ಕು ಲಕ್ಷ ಸದಸ್ಯರ ನೋಂದಣಿ ಗುರಿ ಹೊಂದಲಾಗಿದೆ. ಪ್ರಸ್ತುತ 25 ಸಾವಿರ ನೋಂದಣಿ ಮಾಡಲಾಗಿದೆ. ಮಂಡ್ಯ, ಮೈಸೂರು, ಮೈಸೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಗಳೂರು, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಪರಿಶೀಲನಾ ಜವಾಬ್ದಾರಿ ಉಸ್ತುವಾರಿಯನ್ನು ಪಕ್ಷದ ನಾಯಕರು ನನಗೆ ನೀಡಿದ್ದಾರೆ.