ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಸಂಪೂರ್ಣ ಬಂದ್: ಮಿಮ್ಸ್‌ನಲ್ಲಿ ವೈದ್ಯಾಧಿಕಾರಿಗಳ ಬೇಜವಾಬ್ದಾರಿತನತುರ್ತು ಚಿಕಿತ್ಸೆಯನ್ನು ಹೊರತುಪಡಿಸಿದಂತೆ ಒಪಿಡಿ ಸೇವೆ, ಶಸ್ತ್ರಚಿಕಿತ್ಸೆ ನಡೆಸುವುದರಿಂದಲೂ ವೈದ್ಯರು ದೂರ ಉಳಿದಿದ್ದರು. ಖಾಸಗಿ ನರ್ಸಿಂಗ್ ಹೋಂ, ಕ್ಲಿನಿಕ್‌ಗಳಲ್ಲೂ ಚಿಕಿತ್ಸೆಗೆ ವೈದ್ಯರು ಇರಲಿಲ್ಲ. ಎಲ್ಲಾ ಆಸ್ಪತ್ರೆಗಳೆದುರು ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಒಂದು ದಿನ ಚಿಕಿತ್ಸೆ ಸಿಗುವುದಿಲ್ಲ. ಸಹಕರಿಸಿ ಎಂಬ ನಾಮಫಲಕ ಹಾಕಲಾಗಿತ್ತು.