ಮಂಡ್ಯ ಜಿಲ್ಲಾದ್ಯಂತ ವರಮಹಾಲಕ್ಷ್ಮೀ ಹಬ್ಬಕ್ಕೆ ಸಡಗರದ ಸಿದ್ಧತೆವರಮಹಾಲಕ್ಷ್ಮೀ ಹಬ್ಬದ ಮುನ್ನಾ ದಿನವಾದ ಗುರುವಾರ ನಗರದ ಪೇಟೆಬೀದಿ, ವಿವಿ ರಸ್ತೆ, ಮಹಾವೀರ ವೃತ್ತ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನಜಂಗುಳಿ ತುಂಬಿತ್ತು. ಹಬ್ಬದ ಸಾಮಾನುಗಳ ಖರೀದಿ ಭರಾಟೆ ಜೋರಾಗಿತ್ತು. ಬಾಳೆದಿಂಡು, ಮಾವಿನಸೊಪ್ಪು, ತಾವರೆ ಹೂವುಗಳನ್ನು ರಾಶಿ ಹಾಕಿಕೊಂಡು ವರ್ತಕರು ವ್ಯಾಪಾರದಲ್ಲಿ ತೊಡಗಿದ್ದರು.