ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ, ತಡೆಗೋಡೆ ಕುಸಿತ, ಸಂಪರ್ಕ ರಸ್ತೆಗೆ ಹಾನಿಕಾವೇರಿ ನದಿಗೆ 1,72,161 ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಹುತೇಕ ಮುಳುಗಡೆಗೊಂಡು ಸಮೀಪದಲ್ಲಿನ ತಡೆಗೋಡೆ ಹಾಗೂ ವೆಲ್ಲೆಸ್ಲಿ ಸೇತುವೆ- ಶ್ರೀರಂಗಪಟ್ಟಣ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕಿತ್ತುಹೋಗಿದೆ. ಸೇತುವೆ ಸಮೀಪದಲ್ಲಿನ ತಡೆಗೋಡೆ ಬಹುತೇಕ ಕುಸಿದು ಬಿದ್ದಿದೆ. ಶ್ರೀರಂಗಪಟ್ಟಣ-ವೆಲ್ಲೆಸ್ಲಿ ಸೇತುವೆ ಮಾರ್ಗವಾಗಿ ಕಿರಂಗೂರು ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನದಿ ನೀರು ಹರಿದು ಹೋಗಿದೆ.