ಉತ್ತಮ ಆರೋಗ್ಯಕ್ಕೆ ಯೋಗ ಅವಶ್ಯಕ: ಮಲ್ಲಿಕಾರ್ಜುನ್ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು. ಹಣ- ಅಂತಸ್ತು ಇದ್ದವರು ಶ್ರೀಮಂತರಲ್ಲ. ದೈಹಿಕ, ಮಾನಸಿಕ ಆರೋಗ್ಯ ಇದ್ದವರು ನಿಜವಾದ ಶ್ರೀಮಂತರು. ಎಲ್ಲರೂ ಉತ್ತಮ ಆರೋಗ್ಯ ಬೇಕು ಎನ್ನುತ್ತಾರೆ. ಆದರೆ, ಯಾರೂ ಕೂಡ ಆರೋಗ್ಯದ ಸೂತ್ರಗಳನ್ನು ಪಾಲನೆ ಮಾಡುತ್ತಿಲ್ಲ. ಶಿಸ್ತು ಬದ್ಧ ಜೀವನದಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ.