ಕುಟುಂಬದ ರಕ್ಷಣೆಯಂತೆ ಪರಿಸರ ಸಂರಕ್ಷಣೆಗೂ ಕಾಳಜಿ ವಹಿಸಿ: ಶಾಸಕ ಕೆ.ಎಂ.ಉದಯ್ವರ್ಷ ಪೂರ್ತಿ ಮರಗಳನ್ನು ಕಡಿದು ಪರಿಸರ ದಿನದಂದು ನಾಲ್ಕು ಗಿಡಗಳನ್ನು ನೆಡುವುದಲ್ಲ. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚುತ್ತಿದೆ. ನಗರೀಕರಣ, ಪರಿಸರ ಮಾಲಿನ್ಯ ದಿನೇ ದಿನೇ ಅದರೊಂದಿಗೆ ಬೆರೆಯುತ್ತಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ. ಪ್ರತಿಯೊಬ್ಬರು ತಮ್ಮ ಕುಟುಂಬದ ರಕ್ಷಣೆ ಮಾಡಿಕೊಳ್ಳುವಂತೆ ಪರಿಸರ ಸಂರಕ್ಷಣೆಗೂ ಕಾಳಜಿ ವಹಿಸಬೇಕು.