ಕೆರೆ- ಕಟ್ಟೆಗಳಿಗೆ ಹರಿಯುತ್ತಿರುವ ಫೇವರಿಚ್ ಮೆಗಾ ಫುಡ್ ಪಾರ್ಕ್ ತ್ಯಾಜ್ಯ ನೀರುಕೆರೆ ನೀರು ಕಲುಷಿತಗೊಂಡಿರುವುದುರಿಂದ ಫುಡ್ ಪಾರ್ಕ್ ವ್ಯಾಪ್ತಿಯ ತಾಲೂಕಿನ ಬೂಕನಕೆರೆ ವ್ಯಾಪ್ತಿಯ ಐಚನಹಳ್ಳಿ, ಬಣ್ಣೇನಹಳ್ಳಿ, ತಗಡೂರು, ವೆಂಕಟರಾಜಪುರ, ಅಶೋಕನಗರ, ಚೀಕನಹಳ್ಳಿ ಮುಂತಾದ ಗ್ರಾಮಗಳ ಜನ ಗಂಭೀರ ಅಪಾಯಕ್ಕೆ ಸಿಲುಕಿದ್ದಾರೆ. ಬಣ್ಣೇನಹಳ್ಳಿ ಬಳಿ ಸ್ಥಾಪನೆಯಾದ ಫೇವರಿಚ್ ಮೆಗಾ ಫುಡ್ ಪಾರ್ಕ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದರು.