ಗುರುಗಳಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿವಿದ್ಯಾರ್ಥಿಗಳಲ್ಲಿ ಸಾಮಾಜಿಕ ಬದ್ಧತೆ ಬೆಳೆಯಬೇಕು. ದೇಶದ ಬಗ್ಗೆ ಗೌರವ, ಪ್ರೀತಿ ಜೊತೆಗೆ ಎಲ್ಲರು ನಮ್ಮವರು ಎಂಬ ಭಾವನೆ ಬರಬೇಕು. ಇದನ್ನು ಶಾಲಾ ಹಂತದಲ್ಲಿ ಶಿಕ್ಷಕರು ಕಲಿಸಬೇಕು. ಸರ್ಕಾರಿ ಶಾಲೆಯಲ್ಲಿ ಓದಿದ ಗ್ರಾಮೀಣ ಮಕ್ಕಳು ಐಎಎಸ್, ಐಪಿಎಸ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳಾಗಿದ್ದಾರೆ ಎಂಬುದನ್ನು ತಿಳಿಸಬೇಕು.