ಬಿಎಸ್‌ವೈ ವಿರುದ್ಧ ರಾಜಕೀಯ ದ್ವೇಷ ಸಾಧನೆ: ಸಿ.ಟಿ.ಮಂಜುನಾಥ್ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದನ್ನು ಮುಚ್ಚಿಹಾಕುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನೀಡಲಾಗಿದ್ದ ಫೋಕ್ಸೋ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.