ಎಚ್ಡಿಕೆ ಅಭೂತಪೂರ್ವ ಗೆಲುವು: ಕೆ.ಆರ್.ಪೇಟೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಕಳೆದ ಲೋಕಸಭಾ ಚುನಾವಣೆಯಲ್ಲಿ ಏಳಕ್ಕೆ ಏಳು ಜೆಡಿಎಸ್ ಶಾಸಕರಿದ್ದರೂ ಕಾಂಗ್ರೆಸ್ ಪಕ್ಷದ ಮುಖಂಡರ ಧೋರಣೆಯಿಂದ ಜೆಡಿಎಸ್ ಅಭ್ಯರ್ಥಿ ಸೋಲಬೇಕಾಯಿತು. ಆದರೆ, ಅದೇ ಸನ್ನಿವೇಶ ಈಗ ಮರುಕಳಿಸಿದ್ದು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಆರು ಶಾಸಕರು ಹಾಗೂ ಸಚಿವರು, ವಿಧಾನ ಪರಿಷತ್ ಸದಸ್ಯರು ಇದ್ದರೂ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.