ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು: ಬಿಇಒ ಸೀತಾರಾಮುಶಾಲಾ ಮಕ್ಕಳಿಗೆ ಅಪೌಷ್ಟಿಕತೆ ಇರುವುದನ್ನು ಮನಗಂಡು ರಾಜ್ಯ ಸರ್ಕಾರ ಬಿಸಿಯೂಟದ ಜೊತೆಗೆ, ಹಾಲು, ರಾಗಿಮಾಲ್ಟ್, ಮೊಟ್ಟೆ ಮುಂತಾದುವುಗಳನ್ನು ಒದಗಿಸುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಕಡೆಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ.