ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿಮೈತ್ರಿ ಪಕ್ಷದ ಅಭ್ಯರ್ಥಿ ಕೆ.ವಿವೇಕಾನಂದರು ಯುವಕರಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸಿ ತಮ್ಮ ಅಕ್ಷರ ಕಲಿಸಿದ ಗುರುಗಳ ಸೇವೆ ಮಾಡಲು ಆಸಕ್ತಿ ಹೊಂದಿದ್ದಾರೆ. ಅಕ್ಷರ ಕಲಿಸಿದ ಶಿಕ್ಷಕರ ಋಣ ತೀರಿಸುವ ಸಲುವಾಗಿಯೇ ಅವರು ಇಂದು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಮೈಸೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ವಿವೇಕಾನಂದ ಎಲ್ಲಾ ಜಾತಿ, ಧರ್ಮ ಮತ್ತು ಸಮುದಾಯಗಳ ಗಮನ ಸೆಳೆದಿದ್ದಾರೆ.